ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಈ ಬಾರಿಯ ಸೋಲು ಅನಿರೀಕ್ಷಿತ ಎನ್ನಬಹುದು. ಆದರೆ ಸೋಲಿನ ನಂತರವೂ ನಿಖಿಲ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ಮಂಡ್ಯ ಮತ್ತು ರಾಮನಗರದಲ್ಲಿ ಮಾಡಿದ್ದಂತೆ ಒಂದು ಹೇಳಿಕೆ ಕೊಟ್ಟು ಸುಮ್ಮನಾಗಿಲ್ಲ. ಹೊಸದೊಂದು ಸಂಪ್ರದಾಯ ಹುಟ್ಟುಹಾಕಿ, ಚನ್ನಪಟ್ಟಣದಲ್ಲಿ ತಮಗೆ ಮತ ನೀಡಿದವರಿಗೆ ಧನ್ಯವಾದ ಎನ್ನುತ್ತಾ ಕೃತಜ್ಞತಾ ಸಮಾವೇಶ ಮಾಡಿದ್ದಾರೆ.
ಈ ಸಭೆಯಲ್ಲಿ ಮಾತನಾಡಿರುವ ಕುಮಾರಸ್ವಾಮಿ ಉಪಚುನಾವಣೆಯ ಸೋಲನ್ನು ನಾನೇ ತೆಗೆದುಕೊಳ್ಳುತ್ತೇನೆ. ನಾಲ್ಕು ತಿಂಗಳ ಹಿಂದೇನೆ ಅಭ್ಯರ್ಥಿ ಘೋಷಣೆ ಮಾಡಿದ್ದರೆ ಈ ಸೋಲಾಗುತ್ತಿರಲಿಲ್ಲ. ನಮಗೆ ಅಭ್ಯರ್ಥಿ ಕೊರತೆ ಆಯ್ತು. ಈ ಹಿನ್ನೆಲೆಯಲ್ಲಿ ಸೋಲುವಂತಾಯಿತು. ದೇವೇಗೌಡರ ಕುಟುಂಬ ರಣಹೇಡಿ ಕುಟುಂಬ ಅಲ್ಲ, ರಣಧೀರಕುಟುಂಬ. ನಿಖಿಕ್ ಕುಮಾರಸ್ವಾಮಿ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡಿದರು. ಕಾರ್ಯಕರ್ತರಿಗಾಗಿ ತಲೆ ಕೊಟ್ಟರು. ನಿಖಿಲ್ ರಣಧೀರನಾಗಿ ಕಣಕ್ಕೆ ಇಳಿದರು ಎಂದು ಹೇಳಿದ್ದಾರೆ.
ದೇವೇಗೌಡರ ಕುಟುಂಬ ರಣಹೇಡಿ ಕುಟುಂಬ ಅಲ್ಲ ರಣಧೀರ ಕುಟುಂಬ. ನಿಖಿಲ್ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡಿದರು. ಕಾರ್ಯಕರ್ತರಿಗಾಗಿ ತಲೆ ಕೊಟ್ಟರು. ನಿಖಿಲ್ ರಣಧೀರನಾಗಿ ಚುನಾವಣೆಯ ಕಣಕ್ಕೆ ಇಳಿದಿದ್ದರು ಎಂದು ಅಭಿಪ್ರಾಯ ಪಟ್ಟಿದ್ದಾರೆ ಕುಮಾರಸ್ವಾಮಿ.
ನಾನು ಸಂಸದನಾಗಲು, ಶಾಸಕನಾಗಲು ಎಂದೂ ಕೂಡ ಹಪಾಹಪಿಸಿಲ್ಲ.ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ, ರಾಜಕಾರಣದಲ್ಲೇ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಿದ್ದೆ, ಈಗ ಸೋತಿದ್ದರೂ ಸುಮ್ಮನೆ ಕೂರಲ್ಲ, ಜನಪರವಾಗಿ ಹೋರಾಡುವೆ ಎಂದಿರುವ ನಿಖಿಲ್ ಕುಮಾರಸ್ವಾಮಿ ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. 19 ಸ್ಥಾನ ಗೆದ್ದು ಈಗ 18ಕ್ಕೆ ಇಳಿದಿದ್ದೇವೆ. ನಿಮ್ಮಲ್ಲೆರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ. ನಾನು ಸೋತು ಒಂದು ವಾರ ಆಗಿದೆ. ಎಂದೆಗುಂದಬಾರದು. ಸೋತ ನೆಲದಲ್ಲೆ ಮತ್ತೆ ಗೆಲುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ ನಿಖಿಲ್ ಕುಮಾರಸ್ವಾಮಿ.
ಇತ್ತ ಕುಮಾರಸ್ವಾಮಿ ಕೂಡಾ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತೇವೆ. ನಿಖಿಲ್ ಅವರು ಚನ್ನಪಟ್ಟಣದಲ್ಲಿ ಇರಲಿ ಎಂಬುದು ಕಾರ್ಯಕರ್ತರ ಭಾವನೆ. ಆದರೆ, ನಿಖಿಲ್ ರಾಜ್ಯದಲ್ಲಿ ಪಕ್ಷ ಕಟ್ಟಬೇಕು. ನಾನು ಕೇಂದ್ರದಲ್ಲಿ ಮಂತ್ರಿ ಆಗಿದ್ದೇನೆ, ನನಗೆ ಆರೋಗ್ಯದ ಸಮಸ್ಯೆ ಇದೆ. ಮೂರನೇ ಬಾರಿ ಆಪರೇಷನ್ ಮಾಡಿಸಿಕೊಂಡಿದ್ದೇನೆ. ಈಗ ಪಕ್ಷದ ಸಂಘಟನೆಯ ಜವಾಬ್ದಾರಿ ನಿಖಿಲ್ ಮೇಲಿದೆ. ನಿಖಿಲ್ ಕುಮಾರಸ್ವಾಮಿ ಒಬ್ಬರೇ ಇವತ್ತು ಈ ಪಕ್ಷದ ಜೀವಾಳ ಎಂದು ಹೇಳಿದ್ದಾರೆ.
ಕ್ಷೇತ್ರದ ಜನ 87 ಸಾವಿರ ಮತಗಳನ್ನು ನೀಡಿದ್ದಾರೆ. ಅವರಿಗೆ ಧನ್ಯವಾದ ತಿಳಿಸುವೆ. ಕಾರ್ಯಕರ್ತರು ಆತ್ಮಸ್ಥೆರ್ಯ ಕಳೆದುಕೊಳ್ಳಬೇಕಿಲ್ಲ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಉತ್ತರ ಕೊಟ್ಟೇ ಕೊಡ್ತೀವಿ ಎಂದು ಕುಮಾರಸ್ವಾಮಿ ಹೇಳಿದರೆ ನಾನು ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುವೆ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾನ ಮಾಡಿದ್ದಾರೆ.