ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೀವ್ ಅವರ ಧರ್ಮಪತ್ನಿಯಾಗಿದ್ದ ಸರೋಜಾ ಅವರಿಗೆ ಸುದೀಪ್ ಸೇರಿದಂತೆ ಒಟ್ಟು ಮೂವರು ಮಕ್ಕಳಿದ್ದಾರೆ. ತಾಯಿ ಸರೋಜಾ ಅವರ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದರೂ, ಸುದೀಪ್ ಬಿಗ್ ಬಾಸ್ ನಿರೂಪಣೆಯನ್ನು ನಡೆಸಿಕೊಟ್ಟಿದ್ದಾರೆ.
ಬಿಗ್ ಬಾಸ್ ನಿರೂಪಣೆ ವೇಳೆ ನಾನು ಶೋಗೆ ಬರುವ ಸ್ಥಿತಿಯಲ್ಲಿರಲಿಲ್ಲ ಎಂದು ಸುದೀಪ್ ಹೇಳಿದ್ದರು. ಇದು ಬಹುಶಃ ಬಿಗ್ ಬಾಸ್ ಶೋ ಬಿಡುತ್ತಿರುವುದರಕ್ಕೆ ಇರಬೇಕು ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ ಸುದೀಪ್ ಅವರ ತಾಯಿಯ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಈ ಸಂದರ್ಭದಲ್ಲೂ ಕರ್ತವ್ಯ ಮರೆಯದೆ ಶೋ ನಡೆಸಿಕೊಟ್ಟು, ತಾಯಿಯ ಆರೈಕೆಗೆ ತೆರಳಿದ್ದರು.